varthabharthi


ಉಡುಪಿ

ಕೋಟ ಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ರಮೇಶ್ ಆಯ್ಕೆ

ವಾರ್ತಾ ಭಾರತಿ : 24 Sep, 2022

ಉಡುಪಿ, ಸೆ.24: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕಳೆದ 17 ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುತ್ತಿರುವ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಈ ಬಾರಿ ಕನ್ನಡ ಚಿತ್ರನಟ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ.

ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ.ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ , ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದುವರೆಗೆ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದವರಲ್ಲಿ ಡಾ.ಎಂ.ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ,  ಗಿರೀಶ ಕಾಸರವಳ್ಳಿ,  ಜಯಶ್ರೀ,  ಡಾ.ಎಂ.ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ.ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ,  ಗಿರೀಶ್ ಭಾರದ್ವಾಜ್ ಸೇರಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು