varthabharthi


ಕರ್ನಾಟಕ

ಜಾರಕಿಹೊಳಿ ಸೀಡಿ ಪ್ರಕರಣ: ಲಿಖಿತ ವಾದ ಸಲ್ಲಿಸದ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

ವಾರ್ತಾ ಭಾರತಿ : 26 Sep, 2022

ಬೆಂಗಳೂರು, ಸೆ.26: ಮಾಜಿ ಸಚಿವ, ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲಾವಕಾಶ ನೀಡಿದರೂ ಲಿಖಿತ ವಾದ ಮತ್ತು ವಿಚಾರಣೆಗಳ ಸಾರಾಂಶ ಸಲ್ಲಿಸದ ರಾಜ್ಯ ಸರಕಾರ ಹಾಗೂ ಎಸ್‌ಐಟಿ ವಿರುದ್ಧ ಹೈಕೋರ್ಟ್ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ. 

ರಮೇಶ್ ಜಾರಕಿಹೊಳಿ ಅವರ ಸೀಡಿ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿರುವುದರ ಸಿಂಧುತ್ವ ಮತ್ತು ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣ ರದ್ದು ಕೋರಿ ಸಂತ್ರಸ್ತೆ ಹಾಗೂ ಮತ್ತಿಬ್ಬರು ಆರೋಪಿಗಳಾದ ನರೇಶ್, ಶ್ರವಣ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. 

ಅರ್ಜಿದಾರರ ಪರ ವಕೀಲರೂ ಈಗಾಗಲೇ ತಮ್ಮ ವಾದವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ. ಅದರೆ, ಎಸ್‌ಐಟಿ ಮತ್ತು ಸರಕಾರ ಇನ್ನೂ ಲಿಖಿತ ವಾದ ಮತ್ತು ವಿಚಾರಣೆಗಳ ಸಾರಾಂಶವನ್ನು ಸಲ್ಲಿಸಿಲ್ಲ. ಶೀಘ್ರವೇ ಈ ಹೈಕೋರ್ಟ್ ಆದೇಶವನ್ನು ಪಾಲಿಸಬೇಕೆಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)