varthabharthi


ಕರ್ನಾಟಕ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಲ್. ಗಂಗಾಧರ ಮೂರ್ತಿ ನೇಮಕ

ವಾರ್ತಾ ಭಾರತಿ : 27 Sep, 2022

ಎಲ್. ಗಂಗಾಧರ ಮೂರ್ತಿ

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಲ್. ಗಂಗಾಧರ ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.  

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ''ರಾಜ್ಯ ಪ್ರಧಾನ ಕಾರ್ಯದರ್ಶಿ'' ಯನ್ನಾಗಿ  ಕೂಡಲೇ ಜಾರಿಗೆ ಬರುವಂತೆ ಎಲ್. ಗಂಗಾಧರ ಮೂರ್ತಿ ಅವರನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಆದೇಶ ಹೊರಡಿಸಿದ್ದಾರೆ. 

ಸೋಮವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ನೂತನ ಪದಾಧಿಕಾರಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದರು.  

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು