ಭಾರತ್ ಜೋಡೊ ಯಾತ್ರೆಯಲ್ಲಿ ಕವಿತಾ, ಇಂದಿರಾ ಲಂಕೇಶ್ ಭಾಗಿ
ಫೋಟೋ ಹಂಚಿಕೊಂಡ ರಾಹುಲ್ ಗಾಂಧಿ ಗೌರಿ ಲಂಕೇಶ್ ಬಗ್ಗೆ ಹೇಳಿದ್ದೇನು?
ರಾಹುಲ್ ಗಾಂಧಿ ಜೊತೆ ಕವಿತಾ ಲಂಕೇಶ್ ಮತ್ತು ಇಂದಿರಾ ಲಂಕೇಶ್
ಬೆಂಗಳೂರು: 2017 ರಲ್ಲಿ ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಮತ್ತು ಕವಿತಾ ಲಂಕೇಶ್ ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
ಈ ಸಂಬಂಧ ತನ್ನ ಟ್ವಿಟರ್ ಖಾತೆಯಲ್ಲಿ ಫೋಟೊ ಹಂಚಿಕೊಂಡಿರುವ ರಾಹುಲ್ ಗಾಂಧಿ, ''ಗೌರಿ ಸತ್ಯದ ಪರ ನಿಂತರು ಗೌರಿ ಧೈರ್ಯವಾಗಿ ನಿಂತರು ಗೌರಿ ಸ್ವಾತಂತ್ರ್ಯಕ್ಕಾಗಿ ನಿಂತರು ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ. ಭಾರತ್ ಜೋಡೋ ಯಾತ್ರೆ ಅವರ ಧ್ವನಿ, ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ!'' ಎಂದು ಬರೆದುಕೊಂಡಿದ್ದಾರೆ.
ಭಾರತ್ ಜೋಡೊ ಪಾದಯಾತ್ರೆಯೂ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆಯುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಪಾಲ್ಗೊಂಡಿದ್ದಾರೆ.
Gauri stood for Truth
— Rahul Gandhi (@RahulGandhi) October 7, 2022
Gauri stood for Courage
Gauri stood for Freedom
I stand for Gauri Lankesh and countless others like her, who represent the true spirit of India.
Bharat Jodo Yatra is their voice.
It can never be silenced. pic.twitter.com/TIpMIu36nY