ಮೀಲಾದುನ್ನೆಬಿ ಹಿನ್ನೆಲೆ; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಬೆಳ್ಳಾರೆ: ಮೀಲಾದುನ್ನೆಬಿ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿಸಭೆ ಶುಕ್ರವಾರ ನಡೆಯಿತು.
ಸಭೆಯು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ರವರ ನೇತೃತ್ವದಲ್ಲಿ ನಡೆಯಿತು. ಠಾಣಾಧಿಕಾರಿ ಮಾತನಾಡಿ, ಶಾಂತಿಯುತವಾಗಿ ಹಬ್ಬವನ್ನು ಆಚರಿಸಿ, ಯಶಸ್ವಿಯಾಗಿ ನಡೆಯಲಿ ಎಂದು ಕರೆ ನೀಡಿದರು ಹಾಗೂ ಈ ಸಂದರ್ಭದಲ್ಲಿ ಅಹಿತಕರ ಘಟನೆಗೆ ಎಡೆಯಾದರೆ ತಕ್ಷಣ ಠಾಣೆಗೆ ಮಾಹಿತಿ ನೀಡಿ ಸಹಕರಿಸಿ ಎಂದರು. ಸಭೆಯಲ್ಲಿ ಠಾಣೆ ವ್ಯಾಪ್ತಿಗೊಳಪಟ್ಟ ಮಸೀದಿಯ ಪ್ರಮುಖರು ಉಪಸ್ಥಿತರಿದ್ದರು.
Next Story