ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಜಾಮೀನಿನ ಮೇಲೆ ಬಿಡುಗಡೆ
ಮಂಗಳೂರು, ಅ.8: ಫೇಸ್ ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿ ಶುಕ್ರವಾರ ರಾತ್ರಿ ಬಂಧಿತ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಊರ್ವ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಅವರನ್ನು ಬಂಧಿಸಲಾಗಿತ್ತು. ಶನಿವಾರ ಬೆಳಗ್ಗೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ
Next Story