ಅ.14: ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ; ಅಧ್ಯಕ್ಷರಾಗಿ ಡಾ.ಸತೀಶ್ ಕುಮಾರ್ ಹೊಸಮನಿ ಆಯ್ಕೆ
ಮಂಗಳೂರು; ಅಕ್ಟೋಬರ್ 14ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮಳನ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಡಾ.ಸತೀಶ್ ಕುಮಾರ್ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ನಿರ್ದೇಶಕ ರಾಗಿ ಸೇವೆ ಸಲ್ಲಿಸುತ್ತಿದ್ದು, ಕರ್ನಾಟಕ ಡಿಜಿಟಲ್ ಗ್ರಂಥಾಲಯ ದಲ್ಲಿ ಒಟ್ಟು 2ಕೋಟಿ 74ಲಕ್ಷ ಕ್ಕೂ ಅಧಿಕ ಸದಸ್ಯ ರನ್ನು ನೊಂದಾಯಿಸಿ 16 ಪುಸ್ತಕ ಗಳನ್ನು ಬರೆದು ಪ್ರಕಟಿಸಿ ಲಂಡನ್ ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿ ದ್ದಾರೆ.ಹಲವಾರು ಪ್ರಶಸ್ತಿ ಪುರಸ್ಕಾರ ಗಳಿಗೆ ಪಾತ್ರ ರಾಗಿದ್ದಾರೆ ಎಂದು ಮಂಜುನಾಥ್ ಸಾಗರ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಸಮಿತಿ ಗೌರವಾಧ್ಯಕ್ಷ ಚಿತ್ತರಂಜನ್ ಬೋಳಾರ್, ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಜಿ. ಕೆ. ಹರಿಪ್ರಸಾದ್ ರೈ ಮತ್ತು ಕೃಷ್ಣಪ್ಪ ಗೌಡ ಪಡ್ಡಂಬೈಲ್ ಮೊದಲಾದವರು ಉಪಸ್ಥಿತರಿದ್ದರು
Next Story