ಕಂದಾವರ ರಘುರಾಮ ಶೆಟ್ಟರಿಗೆ ಬಂಟ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ
ಮಂಗಳೂರು, ಅ.13: ಜಾಗತಿಕ ಬಂಟ ಪ್ರತಿಷ್ಠಾನದ ಆಶ್ರಯದಲ್ಲಿ ಜರಗಿದ ೨೬ನೇ ವಾರ್ಷಿಕ ಮಹಾಸಭೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ರೂ.25 ಸಾವಿರ ನಗದಿನೊಂದಿಗೆ ನೀಡಲಾಗುವ ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ ಹಾಗೂ ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ ಅವರಿಗೆ ನೀಡಲಾಯಿತು.
ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಸನ್ಮಾನಿಸಿದರು. ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ಭಾಷಣ ಮಾಡಿದರು.
ಜಾಗತಿಕ ಬಂಟ ಪ್ರತಿಷ್ಠಾನದ ಪೋಷಕ ಡಾ.ಬಿ.ಆರ್.ಶೆಟ್ಟಿ, ಮಾಜಿ ಅಧ್ಯಕ್ಷ ಡಾ.ಎಂ. ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ಕುಶಲ್ ಎಸ್. ಹೆಗ್ಡೆ, ಪ್ರಮುಖರಾದ ಕೆ.ಸಚ್ಚಿದಾನಂದ ಹೆಗ್ಡೆ, ಡಾ.ಬಿ.ಸಂಜೀವ ರೈ, ಸಿ.ಎ.ರಘುಚಂದ್ರ ಶೆಟ್ಟಿ, ಆಯ್ಕೆ ಸಮಿತಿಯ ಪ್ರೊ.ಜಿ.ಆರ್.ರೈ ಮತ್ತು ಪಳ್ಳಿ ಕಿಶನ್ ಹೆಗ್ಡೆ, ಸನ್ಮಾನಿತರ ಬಂಧುಗಳಾದ ಶೈಲಜಾ, ಅಭಿರಾಮ ಶೆಟ್ಟಿ ಉಪಸ್ಥಿತರಿದ್ದರು.
ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ವೈ.ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ನ್ಯಾಯವಾದಿ ಕಳ್ಳಿಗೆ ತಾರಾನಾಥ ಶೆಟ್ಟಿ ವಂದಿಸಿದರು. ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.