ದಾವಣಗೆರೆ: ಡೆತ್‌ನೋಟ್ ಬರೆದಿಟ್ಟು ಪೊಕ್ಸೊ ಪ್ರಕರಣದ ಆರೋಪಿ ಆತ್ಮಹತ್ಯೆ
ದಾವಣಗೆರೆ: ಪೊಕ್ಸೊ ಪ್ರಕರಣದ ಆರೋಪಿಯೋರ್ವ ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ರವಿವಾರ ಬೆಳಗ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರವುದು ವರದಿಯಾಗಿದೆ.
ಆಟೋ ಚಾಲಕ ವೀರೇಶ್ (24) ಮೃತ ವ್ಯಕ್ತಿಯಾಗಿದ್ದು, 2020 ರಲ್ಲಿ ಆತನ ವಿರುದ್ಧ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ಸದ್ಯ ಆರೋಪಿಯು ಜಾಮೀನಿನ ಮೇಲೆ ಹೊರಗಿದ್ದ ಎನ್ನಲಾಗಿದೆ. ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿ, 9 ಜನರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story