ಭೂತಕೋಲ ಹಿಂದೂ ಸಂಸ್ಕೃತಿ ಎಂಬ ರಿಷಬ್ ಶೆಟ್ಟಿ ಹೇಳಿಕೆ ಸರಿಯಲ್ಲ: ನಟ ಚೇತನ್
ನಟ ಚೇತನ್ ಅಹಿಂಸಾ | ರಿಷಬ್ ಶೆಟ್ಟಿ
ಬೆಂಗಳೂರು: 'ಭೂತಕೋಲ ಹಿಂದೂ ಸಂಸ್ಕೃತಿ' ಎಂಬ ‘ಕಾಂತಾರ’ ಸಿನೆಮಾ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿಕೆ ಬಗ್ಗೆ ನಟ ಚೇತನ್ ಅಹಿಂಸಾ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಚೇತನ್, 'ಭೂತಕೋಲ ಹಿಂದೂ ಸಂಸ್ಕೃತಿ ಎಂಬ ರಿಷಬ್ ಶೆಟ್ಟಿ ಹೇಳಿಕೆ ಸರಿಯಲ್ಲ' ಎಂದು ಹೇಳಿದ್ದಾರೆ.
''ನಮ್ಮ ಕನ್ನಡದ ಚಲನಚಿತ್ರ 'ಕಾಂತಾರ'ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು'' ಎಂದು ಟ್ವೀಟ್ ಮಾಡಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen