ಹಿಂದೂ, ಕ್ರಿಶ್ಚಿಯನ್, ಇಸ್ಲಾಮ್ ಆಮದು ಮಾಡಿಕೊಂಡ ಧರ್ಮಗಳು: ನಟ ಚೇತನ್ ಅಹಿಂಸಾ
ನಟ ಚೇತನ್ ಅಹಿಂಸಾ
ಬೆಂಗಳೂರು: 'ಹಿಂದೂ, ಕ್ರಿಶ್ಚಿಯನ್, ಇಸ್ಲಾಮ್ ಆಮದು ಮಾಡಿಕೊಂಡ ಧರ್ಮಗಳು' ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಭಾರತವು ವೈವಿಧ್ಯಮಯವಾದ ಮತ್ತು ರೋಮಾಂಚಕವಾದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ. ನಮ್ಮ ಆದಿವಾಸಿ, ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸುವ ಮತ್ತು ಗುರುತಿಸುವ ಆಂದೋಲನವು ನಡೆಯುತ್ತಿದೆ. ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಮ್ ಧರ್ಮ ಇಂತಹ ‘ಆಮದು ಮಾಡಿಕೊಂಡ’ ಧರ್ಮಗಳು ಇತರ ಎಲ್ಲಾ ಧರ್ಮಗಳಂತೆಯೇ ಅವಿಭಾಜ್ಯವಾಗಿವೆ. ಎಲ್ಲಾ ಅಸಮಾನತೆಗಳನ್ನು ನಾವು ವಿರೋಧಿಸಬೇಕು'' ಎಂದು ಹೇಳಿದ್ದಾರೆ.
ಇತ್ತೇಚೆಗಷ್ಟೇ 'ಭೂತಕೋಲ ಹಿಂದೂ ಸಂಸ್ಕೃತಿ ಎಂಬ ರಿಷಬ್ ಶೆಟ್ಟಿ ಹೇಳಿಕೆ ಸರಿಯಲ್ಲ' ಎಂದು ನಟ ಚೇತನ್ ಅಹಿಂಸಾ ನೀಡಿದ್ದ ಹೇಳಿಕೆಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಸಂಬಂಧ ಚೇತನ್ ವಿರುದ್ಧ ದೂರು ಕೂಡ ದಾಖಲಾಗಿದೆ.
ಇದನ್ನೂ ಓದಿ: ಭೂತ ಕೋಲದ ಬಗ್ಗೆ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಗೆ ದೂರು
Next Story