ಪಾವಗಡ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಪಾವಗಡ: ಸಾಲಬಾಧೆ ತಾಳಲಾರದೆ ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಚೆನ್ನಮ್ಮ ರೆಡ್ಡಿಹಳ್ಳಿ ಗ್ರಾಮದ ನಿವಾಸಿ ವೆಂಕಟೇಶಪ್ಪ ಎಂಬವರ ಪುತ್ರ ಮಲ್ಲಿಕಾರ್ಜುನ (27) ಮೃತರು ಎಂದು ಗುರುತಿಸಲಾಗಿದೆ.
ಕೃಷಿ ಚಟುವಟಿಕೆಗಳಿಗಾಗಿ ಮಾಡಿದ ಸಾಲ ತೀರಿಸಲಾಗದೆ ಮನನೊಂದು ಶುಕ್ರವಾರ ಮನೆಯಲ್ಲಿ ನೇಣು ಬಿಗಿದು ಕೊಂಡಿರುವುದಾಗಿ ದೂರು ನೀಡಿದ್ದಾರೆ.
ಕೃಷಿಗಾಗಿ ಕೊಳವೆ ಬಾವಿ ಕೊರೆಸಲು ಮೂರು ಲಕ್ಷ ರೂ. ಸಾಲ ಮಾಡಿದ್ದ ಮಲ್ಲಿಕಾರ್ಜುನ ಕೊಳವೆ ಬಾವಿಯಲ್ಲಿ ನೀರು ಸಿಗದ ಕಾರಣ ಮನನೊಂದಿದ್ದ ಹಾಗೂ ಸಾಲ ತೀರಿಸಲು ಸಾಧ್ಯವಾಗದೆ ಭಯಭೀತನಾಗಿದ್ದ ಎಂದು ತಿಳಿದುಬಂದಿದೆ.
ಘಟನೆ ತಿಳಿದು ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ದೂರು ದಾಖಲಿಸಿದ್ದಾರೆ.
Next Story