ನ.1ರಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭ
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮತ್ತು ಮಣಿಪಾಲದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru International Airport) ಕೆಎಸ್ಸಾರ್ಟಿಸಿ (KSRTC) (ಎಸಿ ವೋಲ್ವೋ) ಬಸ್ಗಳ ಸಂಚಾರ ನ.1ರಿಂದ ಆರಂಭಗೊಳ್ಳಲಿದೆ.
ಪೂ.11ಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ.
ಈ ಬಸ್ ರೈಲು ನಿಲ್ದಾಣದಿಂದ ಜ್ಯೋತಿ, ಲಾಲ್ಭಾಗ್, ಕುಂಟಿಕಾನ, ಕಾವೂರು ಮೂಲಕ ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story