ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ
ಬಂಟ್ವಾಳ, ನ.2: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.
ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ(36) ಮೃತಪಟ್ಟವರು. ಇವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರೆನ್ನಲಾಗಿದೆ. ಬುಧವಾರ ಬೆಳಗ್ಗೆ ಅವರ ಮೃತದೇಹ ತಾಲೂಕಿನ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾದ ದಿವಾಕರ ಬಾವಿಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story