ಚಾಮರಾಜನಗರ: ಜಮೀನಿನಲ್ಲಿ ಪ್ರತ್ಯಕ್ಷಗೊಂಡಿದ್ದ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ
ಚಾಮರಾಜನಗರ: ಜಿಲ್ಲೆಯ ಮೇಲಾಜಿಪುರದಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಈ ಹಾವನ್ನು ರಕ್ಷಣೆ ಮಾಡಿ ಅರಣ್ಯಕ್ಕೆ ಬಿಡಲಾಯಿತು.
ಚಾಮರಾಜನಗರ ತಾಲೂಕಿನ ಮೇಲಾಜಿಪುರ ಗ್ರಾಮದ ಮುರಳಿ ಎಂಬವರ ಜಮೀನಿನಲ್ಲಿ ಹೆಬ್ಬಾವು ರವಿವಾರ ತಡರಾತ್ರಿ ಪತ್ತೆಯಾಗಿದೆ.
ಈ ಹೆಬ್ಬಾವನ್ನು ಉರಗ ತಜ್ಞ ಸ್ನೇಕ್ ಅಶೋಕ್ ಅವರು ಅರಣ್ಯ ಇಲಾಖೆಯ ಸಿಬ್ಬಂದಿಯ ಸಹಕಾರದೊಂದಿಗೆ ರಕ್ಷಣೆ ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ | ಕಾರು-ಬೈಕ್ ಮುಖಾಮುಖಿ ಢಿಕ್ಕಿ: ಮಗು ಸೇರಿ ಒಂದೇ ಕುಟುಂಬದ ಮೂವರು ಮೃತ್ಯು
Next Story