ಚಿತ್ರದುರ್ಗ ಮುರುಘಾ ಮಠದಲ್ಲಿ ಫೋಟೊ ಕಳವು ಪ್ರಕರಣ: ಆರೋಪಿಗಳ ಬಂಧನ
ಚಿತ್ರದುರ್ಗ: ಮುರುಘಾ ಮಠದಲ್ಲಿ 47 ಫೋಟೊಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮೋಹನಮೂರ್ತಿ ಹಾಗೂ ಎಸ್ಜೆಎಂ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ಬಂಧಿತರು ಎಂದು ತಿಳಿದು ಬಂದಿದೆ.
'ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೋಹನಮೂರ್ತಿಯನ್ನು ಎರಡು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಶಿವಾನಂದಸ್ವಾಮಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 6ರಂದು ಮುರುಘಾ ಮಠದ ರಾಜಾಂಗಣದ ಗೋಡೆ ಮೇಲಿದ್ದ ಫೋಟೋ ಕಳವು ಮಾಡಿರುವ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ: 'ಜಿಲ್ಲಾ ಉಸ್ತುವಾರಿ ಸಚಿವರಿಗೂ 15 ಲಕ್ಷ ರೂ. ಸಂದಾಯ': ದಾವಣಗೆರೆ ಪಾಲಿಕೆ ವ್ಯವಸ್ಥಾಪಕ– ಗುತ್ತಿಗೆದಾರನ ಆಡಿಯೊ ವೈರಲ್
Next Story