ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಸಿದ ಸಿನೆಮಾ ನಿರ್ಮಾಪಕ ಉಮಾಪತಿ ಗೌಡ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷದ ನಾಯಕರು ಸಜ್ಜಾಗುತ್ತಿದ್ದು, ಕಾಂಗ್ರಸ್ ನಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ.
ಬೊಮ್ಮನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರಸ್ ನ ಟಿಕೆಟ್ ಆಕಾಂಕ್ಷಿಯಾಗಿರುವ ಕನ್ನಡದ ಸಿನೆಮಾ ನಿರ್ಮಾಪಕ ಡಿ. ಉಮಾಪತಿ ಗೌಡ ಅವರು 2 ಲಕ್ಷ ರೂ. ಡಿಡಿ ಮೂಲಕ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿರುದ್ಧ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
► ಕಾಂಗ್ರೆಸ್ ಟಿಕೆಟ್ ಅರ್ಜಿಗೆ 2 ಲಕ್ಷ ರೂ.: ಡಿಕೆಶಿ
'ಕಾಂಗ್ರೆಸ್ ಟಿಕೆಟ್ ಅರ್ಜಿಗೆ 5 ಸಾವಿರ ರೂ. ಶುಲ್ಕ, ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ.ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
Next Story