varthabharthi


ಉಡುಪಿ

ಹಾವಂಜೆ: ರೋಸ್ ಸಮಾರಂಭದಲ್ಲಿ ಕುಸಿದು ಬಿದ್ದು ಯುವತಿ ಮೃತ್ಯು

ವಾರ್ತಾ ಭಾರತಿ : 24 Nov, 2022

ಜೋಸ್ನಾ ಲೂಯಿಸ್

ಉಡುಪಿ, ನ.24: ರೋಸ್ ಸಮಾರಂಭ (ಕ್ರೈಸ್ತರಲ್ಲಿ ಮದುವೆಯ ಮುನ್ನಾ ದಿನ ನಡೆಯುವ ಕಾರ್ಯಕ್ರಮ)ದಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಯುವತಿಯನ್ನು ಹಾವಂಜೆ ನಿವಾಸಿ 23 ವರ್ಷದ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ.

ಇವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.

ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು