ಓಲಾ ಉಬರ್ ಆಟೋಗಳಿಗೆ ದರ ನಿಗದಿ ಮಾಡಿ ಸಾರಿಗೆ ಇಲಾಖೆ ಆದೇಶ
ಬೆಂಗಳೂರು, ನ. 25: ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಲೈಸೆನ್ಸ್ ಹೊಂದಿರುವ ಸಂಸ್ಥೆಗಳಿಗೆ, ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲ ಕಾಲಕ್ಕೆ ನಿಗಧಿಪಡಿಸಿರುವ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್‍ಟಿ ತೆರಿಗೆ ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ಸಾರಿಗೆ ಇಲಾಖೆ ನಿರ್ದೇಶನ ನೀಡಿದೆ.
ಹೈಕೋರ್ಟ್ ಸೂಚನೆಯಂತೆ ಶುಕ್ರವಾರ ನಡೆದ ಸಭೆಯಲ್ಲಿ ಸಾರಿಗೆ ಇಲಾಖೆ ದರವನ್ನು ನಿಗದಿಪಡಿಸಿದ್ದು, ದರ ನಿಗದಿ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಕೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Next Story