ದೇಶದಲ್ಲಿ ಮತದಾರರ ಮಾಹಿತಿ ಕಳ್ಳತನ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರಕಾರದಲ್ಲಿ ನಡೆಯುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು,ನ.27: ದೇಶದಲ್ಲಿ ಮತದಾರರ ಮಾಹಿತಿ ಕಳ್ಳತನ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರಕಾರದಲ್ಲಿ ನಡೆಯುತ್ತಿದೆ. ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಬಗ್ಗೆ ಸ್ವತಂತ್ರ್ಯ ತನಿಖೆಯಾಗಬೇಕಾದರೆ, ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಯಬೇಕಾಗಿದೆ. ಚುನಾವಣಾ ಆಯೋಗವು ಇದಕ್ಕೆ ನಿರ್ದೇಶನ ನೀಡಬೇಕೆಂದು ಅವರು ಆಗ್ರಹಿಸಿದರು.
ಕೇಂದ್ರ ಚುನಾವಣಾ ಆಯೋಗವು ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧವೂ ಕೂಡ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ!
— Karnataka Congress (@INCKarnataka) November 26, 2022
ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ.
ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು.
- @siddaramaiah pic.twitter.com/apkO5X5jXP