ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು, ನ.28: ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್. ಸಂವಿಧಾನವನ್ನು ಗಾಳಿಗೆ ತೂರಿ ತುರ್ತು ಪರಿಸ್ಥಿತಿಯನ್ನು ಹೇರಿದ್ದು ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಸೋಮವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸರಿಯಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ ಎಲ್ಲರನ್ನೂ ಜೈಲಿಗೆ ಹಾಕಿದ ಕಾಂಗ್ರೆಸ್ ಪಕ್ಷದಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ದಿಲ್ಲಿ ಭೇಟಿ: ಶೀಘ್ರವೆ ಹೊಸದಿಲ್ಲಿಗೆ ತೆರಳುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ಕಾಲಾವಕಾಶ ಕೋರಿದ್ದು, ಅವರಿನ್ನು ಸಮಯ ನೀಡಿಲ್ಲ. ಸಮಯ ನೀಡಿದರೆ ಭೇಟಿಯಾಗುತ್ತೇನೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗುತ್ತೇನೆ ಎಂದು ಅವರು ತಿಳಿಸಿದರು.
Next Story