ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
ಹೊಸದಿಲ್ಲಿ, ನ.30: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೊಸದಿಲ್ಲಿಯಲ್ಲಿ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.
ರಾಜ್ಯದ ಹಿತರಕ್ಷಣೆ: ರಾಜ್ಯಕ್ಕೆ 5 ದಶಕಗಳ ಕಾಲ ಸೇವೆ ಸಲ್ಲಿಸಿರುವ ನಾರಿಮನ್ ಅವರು ಕರ್ನಾಟಕದ ನೀರಿನ ಹಿತರಕ್ಷಣೆ ಮಾಡಿದ್ದಾರೆ. ಈಗಲೂ ಅವರ ಸಲಹೆ ಸೂಚನೆಗಳಿಗೆ ಮೌಲ್ಯ ಇದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ, ಎಚ್.ಡಿ.ದೇವೇಗೌಡರ ಕಾಲದಲ್ಲಿ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದೊಂದು ಸೌಜನ್ಯದ ಭೇಟಿಯಾಗಿದ್ದು ಅವರಿಗೆ ಧನ್ಯವಾದವನ್ನು ಹೇಳುವುದಕ್ಕೆ ಬಂದಿದ್ದೇನೆ. ಗಡಿ, ಜಲ ವಿವಾದದ ಬಗ್ಗೆ ಯಾವುದೇ ವಿಶೇಷ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
Next Story