ಶಿವಮೊಗ್ಗ: ಹರಮಘಟ್ಟ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ
ಶಿವಮೊಗ್ಗ, ಡಿ.2: ಹರಮಘಟ್ಟ ಗ್ರಾಮಸ್ಥರಲ್ಲಿ ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಶಿವಮೊಗ್ಗ ತಾಲೂಕು ಹರಮಘಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಶುಕ್ರವಾರ ಬೆಳಗ್ಗೆ ಗಂಡು ಚಿರತೆ ಸೆರೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಮೂರು ದನಗಳನ್ನು ಚಿರತೆ ಬೇಟೆಯಾಡಿ ಭಕ್ಷಿಸಿತ್ತು. ಹಾಗಾಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಹಮರಘಟ್ಟದಲ್ಲಿ ಬೋನು ಇರಿಸಲಾಗಿತ್ತು.
ಚಿರತೆ ಸೆರೆ ಬೋನಿಗೆ ಬಿದ್ದಿರುವ ಮಾಹಿತಿ ಸಿಗುತ್ತಿದ್ದಂತೆ ಜನರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರುಗಳು ಚಿರತೆ ನೋಡಲು ಬಂದ ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟರು.
Next Story