ಹುಬ್ಬಳ್ಳಿ: ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು
ಹುಬ್ಬಳ್ಳಿ, ಡಿ.2: ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಶುಕ್ರವಾರ ವರದಿಯಾಗಿದೆ.
ಕಲಘಟಗಿಯ ಮುಕ್ತುಂ ಮಹಮ್ಮದ್ ರಫಿ ಮನಿಯಾರ (13) ಮೃತ ಬಾಲಕ ಎಂದು ತಿಳಿದು ಬಂದಿದೆ.
ಕಲಘಟಗಿ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಮುಕ್ತುಂ, ತರಗತಿಯಲ್ಲಿ ಬೆಳಿಗ್ಗೆ ಏಕಾಏಕಿ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾನೆನ್ನಲಾಗಿದೆ. ಶಿಕ್ಷಕರು ತಕ್ಷಣ ಅವನನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾದರೂ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
Next Story