ವೆಬ್ ಸೈಟ್ ಮೂಲಕ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!
ಬೆಂಗಳೂರು, ಡಿ.3: ಬಿಜೆಪಿ ವಿರುದ್ಧ ವಿನೂತನ ಪ್ರಚಾರ ಆರಂಭಿಸಿರುವ ರಾಜ್ಯ ಕಾಂಗ್ರೆಸ್ (Karnataka Congress) ‘ಸೋರಿಕೆಯಾದ’ ಅಭ್ಯರ್ಥಿಗಳ ಪಟ್ಟಿಯೊಂದಿಗೆ ವೆಬ್‌ಸೈಟ್ ಮೂಲಕ ಬಿಡುಗಡೆ ಮಾಡಿದೆ.
ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಲು ಮಾನದಂಡಗಳ ಫೋಟೋಗಳೊಂದಿಗೆ 'ಸೋರಿಕೆಯಾದ' ಅಭ್ಯರ್ಥಿಗಳ ಪಟ್ಟಿಯನ್ನು ವೆಬ್‌ಸೈಟ್ https://www.leakedbjp.com/ ಮೂಲಕ ಕಾಂಗ್ರೆಸ್ ಬಿಡುಗಡೆ ಮಾಡುತ್ತಿದೆ.
'ಕೊನೆಯ ದಿನಗಳಲ್ಲಿ ಬಿಜೆಪಿಯ ಕಪಾಟಿನಿಂದ ಅಸ್ಥಿಪಂಜರಗಳು ಉರುಳುತ್ತಿರುವಾಗ, INC KARNATAKA 2023 ರ ಚುನಾವಣೆಯ ಪೂರ್ವದಲ್ಲಿ ಬಿಜೆಪಿಯ ಅನೌಪಚಾರಿಕತೆಯನ್ನು ಪ್ರದರ್ಶಿಸಲು ಸಂಪೂರ್ಣ ವೆಬ್‌ಸೈಟ್ ಅನ್ನು ಮೀಸಲಿಟ್ಟಿದ್ದು, ಈ ಹೊಸ ವೆಬ್‌ಸೈಟ್ ಬೆಂಗಳೂರಿನ ರೌಡಿ ಶೀಟರ್‌ಗಳು ಮತ್ತು ಸ್ಲಂ ಲಾರ್ಡ್‌ಗಳನ್ನು ಬಿಜೆಪಿ ತನ್ನ ಕಾರ್ಯಕರ್ತರನ್ನಾಗಿ ಸೇರಿಸಿಕೊಳ್ಳುವ ಮೂಲಕ ರಾಜಕೀಯವನ್ನು ಹೇಗೆ ಅಪರಾಧೀಕರಿಸುತ್ತಿದೆ ಎಂಬುದರ ಕುರಿತು ವಿವರಗಳನ್ನು ಹೊಂದಿರುತ್ತದೆ' ಎಂದು ಕಾಂಗ್ರೆಸ್ ತಿಳಿಸಿದೆ.
'ಬೆಂಗಳೂರು ನಗರದ ದೊಡ್ಡ ಕೊಳೆಗೇರಿಯೊಂದರಲ್ಲಿ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಗ್ಯಾಂಗ್ ಸ್ಟಾರ್ ಸೈಲೆಂಟ್ ಸುನಿಲ್ ಜೊತೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ ರೌಡಿಶೀಟರ್ ಗಳು ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಒಂದು ವಾರದಿಂದ ಬಿಜೆಪಿ ಸರ್ಕಾರದ ಈ ಕ್ರಮವನ್ನು ವಿರೋಧಿಸುತ್ತಾ ಬರುತ್ತಿದೆ. ಬಿಜೆಪಿಯ ಜನಪ್ರತಿನಿಧಿಗಳು ಕೂಡಾ ರೌಡಿಗಳೊಂದಿಗೆ ನಿಕಟ ಸಂಬಧ ಹೊಂದಿದ್ದು ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬಲವಾಗಿ ಖಂಡಿಸುತ್ತಾ ಬಂದಿದೆ' ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.
'ಶಿಕ್ಷಣ ಮತ್ತು ಮನುಷ್ಯತ್ವದ ಕೊರತೆ, ಬಡವರ ರಕ್ತ ಹೀರುವ ಕಲೆಗಾರಿಕೆ, ಅಧಿಕಾರಕ್ಕಾಗಿ ಏನಾದರೂ ಮಾಡುವ ಮನಸ್ಥಿತಿ, ಅಪರಾಧ ಮಾಡಿರುವ ಅತ್ಯುತ್ತಮ ಟ್ರ್ಯಾಕ್ ರೆಕಾರ್ಡ್ ಇದಿಷ್ಟು ಬಿಜೆಪಿ ಅಭ್ಯರ್ಥಿಗಳ ಅರ್ಹತೆಗಳು' ಎಂದು ವೆಬ್ ಸೈಟ್ ನಲ್ಲಿ ಕಾಂಗ್ರೆಸ್ ಪ್ರಕಟಿಸಿದೆ.
ಕಾಂಗ್ರೆಸ್ ವೆಬ್‌ಸೈಟ್ ನಲ್ಲಿರುವ ಅಭ್ಯರ್ಥಿಗಳ ಪಟ್ಟಿ