ಮಹಾರಾಷ್ಟ್ರ ಸಚಿವರಿಬ್ಬರಿಗೆ ಪ್ರವೇಶಕ್ಕೆ ನಿರ್ಬಂಧ; ಬೆಳಗಾವಿ ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬೆಳಗಾವಿ, ಡಿ. 6: ಗಡಿ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸುವುದಾಗಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಉನ್ನತ ಶಿಕ್ಷಣ, ಸಂಸದೀಯ ವ್ಯವಹಾರ ಸಚಿವ ಚಂದ್ರಕಾಂತ (ದಾದಾ) ಪಾಟೀಲ್, ಅಬಕಾರಿ ಸಚಿವ ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಅವರಿಗೆ ಕರ್ನಾಟಕ ರಾಜ್ಯದ ಗಡಿ ಪ್ರವೇಶ ಮಾಡದಂತೆ ನಿರ್ಬಂಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ್ ಸೋಮವಾರ ಆದೇಶ ಹೊರಡಿಸಿದ್ದು, ಇಂದು (ಮಂಗಳವಾರ) ಮುಂಜಾಗೃತಾ ಕ್ರಮವಾಗಿ ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಳಗಾವಿಯ ಗಡಿಯ ಎಲ್ಲ 22 ಸ್ಥಳಗಳಲ್ಲೂ ಚೆಕ್ಪೋಸ್ಟ್ ನಿರ್ಮಿಸಲಾಗಿದ್ದು, ಬಿಗಿ ಭದ್ರತೆ ಏರ್ಪಡಿಲಾಗಿದ್ದು, ನಿಪ್ಪಾಣಿ ತಾಲೂಕು ಒಂದರಲ್ಲಿಯೇ 6 ಕೆ ಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಕುಗನೊಳ್ಳಿ ಚಕ್ ಪೋಸ್ಟ್ ಗೆ 5 ಡಿ ಆರ್ ತುಕಡಿ ,450 ಜನ ಪೊಲೀಸರು ಮತ್ತು 1 ಎಸ್ಪಿ 1 ಹೆಚ್ಚುವರಿ ಎಸ್ಪಿ, 3 ಜನ ಡಿಎಸ್ಪಿ, 8 ಜನ ಪಿಐ, 30 ಪಿ ಎಸ್ ಐ, 450 ಜನ ಪೊಲೀಸ್ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.
ಬೆಳಗಾವಿಯಲ್ಲಿ ಮರಾಠಿಗರು ಹಾಗೂ ಕನ್ನಡಿಗರು ಸಹಬಾಳ್ವೆ ನಡೆಸುತ್ತಿದ್ದು, ಸದ್ಯ ಗಡಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ರಾಜ್ಯಕ್ಕೆ ಆಗಮಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದರು.
ಇದನ್ನೂ ಓದಿ: ‘ಮಹಾರಾಷ್ಟ್ರ ಸಚಿವರಿಬ್ಬರಿಗೆ ಗಡಿ ಪ್ರವೇಶಕ್ಕೆ ನಿರ್ಬಂಧ’ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ