ಡಿ.8ರಿಂದ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ಡಿ.7: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಡಿ.8ರಿಂದ ರಾಜ್ಯದಲ್ಲಿ ಹಿಂಗಾರು ಮಳೆ (Rain) ಮತ್ತೆ ಚುರುಕಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ರವಿವಾರದವರೆಗೆ ಭರ್ಜರಿ ಮಳೆಯ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಬೊಮ್ಮಾಯುಲ್ಲಾ ಖಾನ್, ಗಡ್ಕರಿ ಶೇಖ್...: ಸಿದ್ದರಾಮಯ್ಯ ಬಗ್ಗೆ ಸಿಟಿ ರವಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ಹೀಗಿದೆ...
Next Story