ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಡಿ.7: ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಸಮೂಹ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿದ್ದ ಸುಷ್ಮಾ ಗೋಡ್ಬಲೆ ಅವರನ್ನು ರಾಜ್ಯ ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನಾ ಅಧಿಕಾರಿಯಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದ ಜೆ.ಮಂಜುನಾಥ್ ಅವರನ್ನು ಆಯುಷ್ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್‍ನ ಯೋಜನಾ ನಿರ್ದೇಶಕರಾಗಿದ್ದ ಡಾ.ಅರುಂಧತಿ ಚಂದ್ರಶೇಖರ್ ಅವರನ್ನು ಖಜಾನೆ ಇಲಾಖೆಯ ಆಯುಕ್ತರನ್ನಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಕೆ.ನಂದಿನಿ ದೇವಿ ಅವರನ್ನು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಕೆಎಸ್ಸಾರ್ಟಿಸಿ ನಿರ್ದೇಶಕರಾಗಿದ್ದ ಡಾ.ನವೀನ್ ಭಟ್ ವೈ. ಅವರನ್ನು ರಾಷ್ಟ್ರೀಯ ಆರೋಗ್ಯ ಮಿಷನ್‍ನ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಐಟಿ, ಬಿಟಿ ಇಲಾಕೆಯ ನಿರ್ದೇಶಕ(ತಾಂತ್ರಿಕ)ರಾಗಿದ್ದ ಎ.ಬಿ.ಬಸವರಾಜು ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶಿಸಲಾಗಿದೆ.