ಭದ್ರಾ ಮೇಲ್ದಂಡೆ ಯೋಜನೆಗೆ ಮುಂದಿನ ಕೇಂದ್ರ ಸಂಪುಟದಲ್ಲಿ ಅನುಮೋದನೆ: ಸಚಿವ ಕಾರಜೋಳ ವಿಶ್ವಾಸ
ಹೊಸದಿಲ್ಲಿ, ಡಿ.13: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಹೊಸದಿಲ್ಲಿಯಲ್ಲಿಂದು ಭೇಟಿಯಾದ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ಕೋರಿದ್ದಾರೆ.
ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿಂದು ಮುಂಜಾನೆ ಈ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಚರ್ಚೆ ನಡೆದಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಸಚಿವ ಕಾರಜೋಳ ವಿನಂತಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಪ್ರಸ್ತಾವ ಅಂತಿಮ ಹಂತದಲ್ಲಿದ್ದು,ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆ. ಮಹದಾಯಿ ಯೋಜನೆಯ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಗೋವಿಂದ್ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Next Story