ಖಾಸಗಿ ಸಂಸ್ಥೆಗಳಿಂದ ಮತದಾರರ ಮಾಹಿತಿ ಸಂಗ್ರಹಕ್ಕೆ ನಿರ್ಬಂಧ: ರಾಜ್ಯ ಚುನಾವಣಾಧಿಕಾರಿ ಸೂಚನೆ
ಬೆಂಗಳೂರು, ಡಿ. 16: ಖಾಸಗಿ ಸಂಸ್ಥೆಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟನೆ ಹೊರಡಿಸಿದ ಅವರು, ಕೆಲವು ಜಿಲ್ಲೆಗಳಲ್ಲಿ ಏಜೆನ್ಸಿ, NGOಗಳು ಮನೆಮನೆಗೆ ತೆರಳಿ ಸರ್ವೆ ಮಾಡುತ್ತವೆ. ಈ ವೇಳೆ ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲೆಗಳ ಚುನಾವಣಾಧಿಕಾರಿಗಳಿಗೆ ನಿದೇರ್ಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Next Story