ಸಾಗರ | ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಸಾಗರ, ಡಿ.18: ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆದ ಘಟನೆ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಆಚಾಪುರದ ಕೆರೆಹಿತ್ತಲು ನಿವಾಸಿ ಗೌತಮ್(20) ಆತ್ಮಹತ್ಯೆಗೆದ ವಿದ್ಯಾರ್ಥಿ. ಇವರು ಸಾಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.
ಗೌತಮ್ ತನ್ನ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story