ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಗಡಿ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಬೆಳಗಾವಿ, ಡಿ:18: ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಮತ್ತು ಶಿವಸೇನೆ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಗಡಿ ಪ್ರವೇಶ ನಿರ್ಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಡಿ.19ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ಇದೇ ದಿನ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯು ಮಹಾ ಮೇಳಾವ್ ಆಯೋಜಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಜನರ ಆಸ್ತಿ–ಪಾಸ್ತಿ– ಪ್ರಾಣ ಹಾನಿ ತಪ್ಪಿಸುವ ಉದ್ದೇಶದಿಂದ ಸಿಆರ್ಪಿಸಿ ಕಲಂ 144 (3) ಅನ್ವಯ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಗಡಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಭದ್ರತೆ: ಬೆಳಗಾವಿಯ ಟೀಳಕವಾಡಿಯಲ್ಲಿರುವ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಮರಾಠಿ ಮೇಳಾವ್ ಕಾರ್ಯಕ್ರಮ ನಡೆಯಲಿದ್ದು, ಸ್ಥಳ್ಕಕೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಕಾರ್ಯಕ್ರಮಕ್ಕೆ ಪೊಲೀಸ್ ಭದ್ರತೆ ಸೇರಿದಂತೆ ಜಾಗ ಪರಿಶೀಲನೆ ನಡೆಸಿದರು.
Next Story