ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಅವೈಜ್ಞಾನಿಕ: ನಿತಿನ್ ಗಡ್ಕರಿಗೆ ಸಂಸದೆ ಸುಮಲತಾ ದೂರು
ಮಂಡ್ಯ, ಡಿ.22: ಬೆಂಗಳೂರು- ಮೈಸೂರು ದಶಪಥ ರಸ್ತೆ ಕಾಮಗಾರಿಯ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಕೇಂದ್ರದ ರಸ್ತೆ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದೆ ಸುಮಲತಾ ಅಂಬರೀಷ್ ಗುರುವಾರ ಮನವಿ ಪತ್ರ ಸಲ್ಲಿಸಿದ್ದಾರೆ.
ತಾನು ಹೆದ್ದಾರಿ ಕಾಮಗಾರಿ ಬಗ್ಗೆ ಪರಿವೀಕ್ಷಣೆ ನಡೆಸಿದ ಸಂದರ್ಭದಲ್ಲಿ ಕಂಡುಬಂದ ಹಲವು ನೈಜ ತಾಂತ್ರಿಕ ಹಾಗೂ ವಿನ್ಯಾಸದ ಲೋಪ ಅವೈಜ್ಞಾನಿಕ ಚರಂಡಿ ಹಾಗೂ ಸರ್ವಿಸ್ ರಸ್ತೆ ವಿನ್ಯಾಸ, ವಿವಿಧ ಭಾಗಗಳಲ್ಲಿ ಹೆದ್ದಾರಿಗೆ ಅಡ್ಡಲಾಗಿ ಕೆಳಸೇತುವೆಗಳ ನಿರ್ಮಾಣ, ಇತರೆ ವಿಷಯಗಳ ಮಾಹಿತಿಯನ್ನು ಮನವಿಯಲ್ಲಿ ಸುವಲತಾ ವಿವರಿಸಿದ್ದಾರೆ.
ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 75 ಕಿ.ಮೀ. ನಾಗಮಂಗಲ, ಕೆ.ಆರ್. ಪೇಟೆ, ಕೆ.ಆರ್.ನಗರ ಮಾರ್ಗವಾಗಿ ಹಾದು ಹೋಗಿರುವ ಮಾಗಡಿ-ಸೋಮವಾರಪೇಟೆ ರಾಜ್ಯ ಹೆದ್ದಾರಿ-85ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಿ ಅಭಿವೃದ್ಧಿಗೊಳಿಸಲು ಅವರು ಕೋರಿದ್ದಾರೆ.
ತನ್ನ ಮನವಿಗೆ ಸ್ಪಂದಿಸಿದ ನಿತಿನ್ ಗಡ್ಕರಿ ಅವರು, ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಲೋಪದೋಷಗಳುನ್ನು ಸರಿಪಡಿಸುವ ನಿಟ್ಟಿನಲ್ಲಿ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸುಮಲತ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.