ಮರಿಯಮ್ಮ ಗೋಳಿಕಟ್ಟೆ
ಪುತ್ತೂರು:ಇಲ್ಲಿನ ಪರ್ಲಡ್ಕದ ಗೋಳಿಕಟ್ಟೆ ನಿವಾಸಿ ದಿ.ಪಿ.ಅಬ್ಬಾಸ್ ಅವರ ಪತ್ನಿ ಮರಿಯಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರಿಯರು ಹಾಗೂ ಸಮಸ್ತ ಶಿಕ್ಷಣ ಮಂಡಳಿಯ ಕೇಂದ್ರ ಸಮಿತಿಯ ಸದಸ್ಯ, ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಉಪಾಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಪರ್ಲಡ್ಕ ಸಹಿತ ಮೂವರು ಪುತ್ರರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮುಸ್ಲಿಂ ಲೀಗ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಹ್ಮದ್ ಜೋಕಟ್ಟೆ, ದ.ಕ. ಜಿಲ್ಲಾಧ್ಯಕ್ಷ ಕೆಎಂ ಫಯಾಝ್, ಪ್ರಧಾನ ಕಾರ್ಯದರ್ಶಿ ಟಿಯು ಇಸ್ಮಾಯಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story