ಕಾರ್ಕಳ | ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ: ಶಿಕ್ಷಕಿಯರು ಸೇರಿ ವಿದ್ಯಾರ್ಥಿಗಳಿಗೆ ಗಾಯ
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.
ಘಟನೆಯಿಂದ ಮೂವರು ಶಿಕ್ಷಕಿಯರು ಸೇರಿ 20 ಮಂದಿ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿ ಭಾಗಕ್ಕೆ ಬಂದಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಸಂತೋಷ್ ಎಂಬ ವಿದ್ಯಾರ್ಥಿಯ ಕೈಮೂಲೆ ಮುರಿದಿದ್ದು, ಮೂರು ಮಂದಿ ಶಿಕ್ಷಕರು ಸಹಿತ 20 ಮಂದಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.