ಕಲ್ಯಾಣಪುರ: ಬೂತ್ ವಿಜಯ್ ಅಭಿಯಾನ ಉದ್ಘಾಟಿಸಿದ ಸಚಿವ ಅಂಗಾರ
ಕಲ್ಯಾಣಪುರ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮತ್ತು ಗ್ರಾಮಾಂತರ ಇವರ ಜಂಟಿ ಆಶ್ರಯದಲ್ಲಿ ಇಂದು ಕಲ್ಯಾಣಪುರ ಶ್ರೀ ಆದಿಶಕ್ತಿ ಬ್ರಹ್ಮಲಿಂಗ ವೀರಭದ್ರ ದೇವಸ್ಥಾನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ 226 ಮತಗಟ್ಟೆಗಳ ಬೂತ್ ವಿಜಯ್ ಅಭಿಯಾನ ಉದ್ಘಾಟನೆಗೊಂಡಿತು.
ರಾಜ್ಯ ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಭಾರತೀಯ ಜನತಾ ಪಕ್ಷದ ಬಾವುಟವನ್ನು ಬೂತ್ ಅಧ್ಯಕ್ಷರಿಗೆ ಸಾಂಕೇತಿಕವಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಲ್ಯಾಣಪುರ ಗ್ರಾಪಂ ಅಧ್ಯಕ್ಷ ಕೃಷ್ಣ ದೇವಾಡಿಗ ಹಾಗೂ ಇತರರು ಉಪಸ್ಥಿತರಿದ್ದರು.
Next Story