ಉತ್ತರ ಪ್ರದೇಶ: ಹೊಲದಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆ
ಗಾಝಿಯಾಬಾದ್ (ಉತ್ತರ ಪ್ರದೇಶ): ಗಾಝಿಯಾಬಾದ್ ಸಮೀಪದ ಹೊಲವೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ರವಿವಾರ ಮಾಹಿತಿ ನೀಡಿದ್ದಾರೆ.
"ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ಗಾಝಿಯಾಬಾದ್ನ ಗ್ರಾಮಾಂತರ ಪೊಲೀಸ್ ಉಪ ಆಯುಕ್ತ ರವಿಕುಮಾರ್ ತಿಳಿಸಿದ್ದಾರೆ.
ಇಡೀ ಪ್ರಕರಣದ ತನಿಖೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಕುಮಾರ್ ಹೇಳಿದರು.
ಈ ಹಿಂದೆ ಜನವರಿ 14 ರಂದು ಪಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರದ ಗಂಗಾಗಂಜ್ ಕಾಡಿನಲ್ಲಿ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿಯ ತಲೆಯನ್ನು ಒಡೆದು, ಶವವನ್ನು ಕಾಡಿನಲ್ಲಿ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
Next Story