varthabharthi


ಕ್ರೀಡೆ

ಏಕದಿನ ರ‍್ಯಾಂಕಿಂಗ್: ನಂ.1 ಸ್ಥಾನಕ್ಕೇರಿದ ಭಾರತ

ವಾರ್ತಾ ಭಾರತಿ : 24 Jan, 2023

 Photo: AP

ಇಂದೋರ್: ನ್ಯೂಝಿಲ್ಯಾಂಡ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು 90 ರನ್‌ನಿಂದ ಗೆದ್ದುಕೊಂಡಿರುವ ಭಾರತ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಜಯಿಸಿ ಕ್ಲೀನ್‌ಸ್ವೀಪ್ ಮಾಡಿದೆ. ಮಾತ್ರವಲ್ಲ ಐಸಿಸಿ ಏಕದಿನ ರ‍್ಯಾಂಕಿಂಗ್ ನಲ್ಲಿ ನಂ.1 ಸ್ಥಾನವನ್ನು ವಶಪಡಿಸಿಕೊಂಡಿದೆ.

2ನೇ ಏಕದಿನ ಪಂದ್ಯವನ್ನು 8 ವಿಕೆಟ್‌ಗಳಿಂದ ಕಳೆದುಕೊಂಡ ಬಳಿಕ ನ್ಯೂಝಿಲ್ಯಾಂಡ್ 2ನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ 4ನೇ ಸ್ಥಾನಕ್ಕೆ ಕುಸಿದಿದೆ.

ಟೀಮ್ ರ್ಯಾಂಕಿಂಗ್‌ನಲ್ಲಿ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿದ ಭಾರತವು ನಂ.1 ಸ್ಥಾನಕ್ಕೇರಿದೆ. ಇತ್ತೀಚೆಗೆ ಶ್ರೀಲಂಕಾ ವಿರುದ್ಧ 3-0 ಅಂತರದಿಂದ ಸರಣಿ ಜಯಿಸಿದ್ದ ರೋಹಿತ್ ಬಳಗ ಸತತ 2ನೇ ಬಾರಿ ಕ್ಲೀನ್‌ಸ್ವೀಪ್ ಸಾಧಿಸಿದೆ.

ಭಾರತವು 114 ರೇಟಿಂಗ್ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 113 ಅಂಕ ಗಳಿಸಿ 2ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯ(112), ನ್ಯೂಝಿಲ್ಯಾಂಡ್(111), ಪಾಕಿಸ್ತಾನ(106)ಕ್ರಮವಾಗಿ 3ನೇ, 4ನೇ ಹಾಗೂ 5ನೇ ಸ್ಥಾನದಲ್ಲಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)