varthabharthi


ದಕ್ಷಿಣ ಕನ್ನಡ

ಧರ್ಮಸ್ಥಳ | ಮೈಸೂರಿನ ವ್ಯಕ್ತಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ

ವಾರ್ತಾ ಭಾರತಿ : 25 Jan, 2023

ಬೆಳ್ತಂಗಡಿ, ಜ.25: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ(Suicide)ಗೆ ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ

ಮೈಸೂರಿನ ಮಂಜು(52) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ.

ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಗೆ ಆಗಮಿಸಿ ಕೂಲಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.

ಜ.24ರಂದು ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಮಂಜು ಅವರನ್ನು ರಕ್ಷಿಸಿದ್ದಾರೆ. ಅವರ ಕೈ-ಕಾಲಿಗೆ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)