ಡಾ. ಶ್ರೀಧರ ಹೊಳ್ಳ
ಉಡುಪಿ: ನಗರದ ಪ್ರಸಿದ್ಧ ವೈದ್ಯ ಹಾಗೂ ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ (67) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಮಿತ್ರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಇವರು ನಗುಮೊಗದ ಸೇವೆಗೆ ಹೆಸರಾಗಿದ್ದರು. ಒಂದು ತಿಂಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದದ್ದ ಡಾ.ಹೊಳ್ಳರನ್ನು ಮಣಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗ್ಗೆ ನಿಧನರಾದರು. ಡಾ.ಹೊಳ್ಳ ಪತ್ನಿ, ಮೂವರು ಪುತ್ರಿರನ್ನು ಅಗಲಿದ್ದಾರೆ.
ಹೊಳ್ಳರ ನಿಧನಕ್ಕೆ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story