ಆಸ್ಟ್ರೇಲಿಯನ್ ಓಪನ್: ಸಬಲೆಂಕಾ ಮಹಿಳಾ ಸಿಂಗಲ್ಸ್ ಚಾಂಪಿಯನ್
ಮೆಲ್ಬೋರ್ನ್, ಜ.28:ವಿಂಬಲ್ಡನ್ ಚಾಂಪಿಯನ್ ಎಲೆನಾ ರೈಬಾಕಿನಾರನ್ನು ಮಣಿಸಿದ ಬೆಲಾರುಸ್ ಆಟಗಾರ್ತಿ ಅರ್ಯನಾ ಸಬಲೆಂಕಾ ಚೊಚ್ಚಲ ಗ್ರಾನ್‌ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಶನಿವಾರ ನಡೆದ ಆಸ್ಟ್ರೇಲಿಯನ್ ಓಪನ್‌ನ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ 24ರ ಹರೆಯದ ಸಬಲೆಂಕಾ ಮೊದಲ ಸೆಟ್ ಸೋಲಿನಿಂದ ಚೇತರಿಸಿಕೊಂಡು ರೈಬಾಕಿನಾರನ್ನು 4-6, 6-3, 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಸಬಲೆಂಕಾ ಗ್ರಾನ್‌ಸ್ಲಾಮ್ ಟೂರ್ನಿಯಲ್ಲಿ ಮೊದಲ ಬಾರಿ ಫೈನಲ್‌ಗೆ ತಲುಪಿದ್ದರೂ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾದರು.
ಸಬಲೆಂಕಾ ಈ ವರ್ಷ ಆಡಿರುವ 11ನೇ ಪಂದ್ಯದಲ್ಲೂ ಜಯಭೇರಿ ಬಾರಿಸಿ ಅಜೇಯ ಗೆಲುವಿನ ಓಟ ಮುಂದುವರಿಸಿದರು. ಇಂದಿನ ಪಂದ್ಯದಲ್ಲಿ ಮಾತ್ರ ಅವರು ಒಂದು ಸೆಟನ್ನು ಸೋತಿದ್ದಾರೆ.
Next Story