ಸಿನಿಮಾ
ನೀವೆಲ್ಲ ನೋಡಿದ್ದು ‘ಕಾಂತಾರ’ ಭಾಗ 2, ಭಾಗ -1 ಮುಂದೆ ಬರಲಿದೆ: ನಟ ರಿಷಬ್ ಶೆಟ್ಟಿ

Photo - Twitter
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡ 'ಕಾಂತಾರ' ಚಿತ್ರವು ಒಟಿಟಿಯಲ್ಲಿ ಬಿಡುಗಡೆ ಆದರೂ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರಿದಿದೆ. ಇನ್ನು ಈ ಸಿನೆಮಾದ ಮುಂದಿನ ಭಾಗದ ಕಥೆ ಏನು ಎನ್ನುವ ಕುತೂಹಲಕ್ಕೆ ಸ್ವತಃ ರಿಷಬ್ ಶೆಟ್ಟಿ ಅವರೇ ಉತ್ತರಿಸಿದ್ದಾರೆ.
ಚಿತ್ರ ತಂಡವು ರವಿವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ರಿಷಬ್ ಶೆಟ್ಟಿ, ''ಕಾಂತಾರದ ಗೆಲುವು ಖುಷಿ ಕೊಟ್ಟಿದೆ. ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೂ ನನ್ನ ಧನ್ಯವಾದ. " ಕಾಂತಾರ ಭಾಗ -2 ಯಾವಾಗ ಎಂದು? ಎಲ್ಲರೂ ಕೇಳುತ್ತಿದ್ದಾರೆ. ನೀವೆಲ್ಲ ನೋಡಿದ್ದು ‘ಕಾಂತಾರ’ ಭಾಗ 2. ‘ಕಾಂತಾರ’ ಭಾಗ -1 ಬರಬೇಕಾಗಿದೆ. ಅದನ್ನು ಶೀಘ್ರದಲ್ಲೇ ನಿರೀಕ್ಷಿಸಿ'' ಎಂದು ಹೇಳಿದ್ದಾರೆ.
ಚಿತ್ರದ ಶತದಿನೋತ್ಸವ ಸಮಾರಂಭವನ್ನು ರವಿವಾರ ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ