ಬಳ್ಳಾರಿ | ಬೀದಿ ನಾಯಿಗಳ ದಾಳಿ: 30ಕ್ಕೂ ಹೆಚ್ಚು ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು
ಬಳ್ಳಾರಿ: ನಗರದ ವಾರ್ಡ್ ನಂ.30ರ ವಟ್ಟಪ್ಪಗೇರಿಯಲ್ಲಿ ಬೀದಿ ನಾಯಿಗಳು ಏಕಾಏಕಿ ನಡೆಸಿದ ದಾಳಿಯಿಂದಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.
ಏಳು ಜನರು ಗಂಭೀರ ಗಾಯಗೊಂಡಿದ್ದು, ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರ್ಯಾಚರಣೆ: ಆಸ್ಪತ್ರೆಗೆ ಪಾಲಿಕೆ ಆಯುಕ್ತ ರುದ್ರೇಶ್ ಭೇಟಿ ನೀಡಿದ್ದು, ಬೀದಿ ನಾಯಿಗಳನ್ನು ಹಿಡಿಯಲು ಪಾಲಿಕೆ ಸಿಬ್ಬಂದಿ ಮುಂದಾಗಿದ್ದಾರೆ. ಬೆಳಗ್ಗೆಯಿಂದಲೇ ನಗರದಲ್ಲಿ ಬೀದಿ ನಾಯಿಗಳ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: ಮಾನ್ಯತೆ ಪಡೆದ ಸಂಸ್ಥೆಗಳಿಗೆ ಮಾತ್ರ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಅವಕಾಶ; ಸರಕಾರ ಆದೇಶ
Next Story