ಹುಬ್ಬಳ್ಳಿ: ಕಾರಿಗೆ ಟ್ಯಾಂಕರ್ ಢಿಕ್ಕಿ; ಮೂವರು ಸ್ನೇಹಿತರು ಮೃತ್ಯು
ಹುಬ್ಬಳ್ಳಿ: ಕಾರಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ನೇಹಿತರು ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ವರದಿಯಾಗಿದೆ.
ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮಹಮ್ಮದ್ ಇಶಾನ್, ಮಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಪೊಲೀಸರು ಗುರುತಿಸಿದ್ದಾರೆ.
ಆರು ಜನ ಸ್ನೇಹಿತರು ಕಾರಿನಲ್ಲಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುತ್ತಿದ್ದರೆನ್ನಲಾಗಿದ್ದು, ಈ ವೇಳೆ ಸಂಗಟಿಕೊಪ್ಪ ಸಮೀಪ ಟ್ಯಾಂಕರ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಕಿಮ್ಸ್ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Next Story