ಕರ್ನಾಟಕ
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪುತ್ರಿಗೆ ಸಿಬಿಐ ನೋಟಿಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ಸಿಬಿಐ ನೋಟಿಸ್ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ಟಾರ್ಗೆಟ್: ದಿನೇಶ್ ಗುಂಡೂರಾವ್ ಆರೋಪ
'ಡಿ.ಕೆ ಶಿವಕುಮಾರ್ ಅವರಿಗೆ ಈಡಿ ನೋಟಿಸ್ ಹಾಗೂ ಅವರ ಪುತ್ರಿಗೆ ಸಿಬಿಐ ನೋಟಿಸ್ ನೀಡಿರುವುದು ರಾಜಕೀಯ ಪಿತೂರಿ. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ED,CBI,ITಯಂತಹ ತನಿಖಾ ಏಜೇನ್ಸಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿವೆ. ಈ ತನಿಖಾ ಸಂಸ್ಥೆಗಳಿಗೆ ಕಾಂಗ್ರೆಸ್ ಬಿಟ್ಟು BJP ನಾಯಕರ ಹಗರಣಗಳು ಕಾಣುವುದಿಲ್ಲವೇ?' ಎಂದು ಪ್ರಶ್ನಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ