ಅತ್ಲೆಟಿಕ್ಸ್ ಸ್ಪರ್ಧೆ: ಸಚಿನ್ ಆಚಾರ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆ
ಉಡುಪಿ, ಮಾ.1: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಪಂ ಮೈಸೂರು ಇವರ ಸಹಯೋಗ ದಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ಅತ್ಲೆಟಿಕ್ಸ್ ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಕಲ್ಯಾಣಪುರದ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ಸಚಿನ್ ಎಸ್.ಆಚಾರ್ಯ ಬೆಳ್ಳಿಪದಕ ಪಡೆದಿದ್ದಾರೆ.
8ನೇ ತರಗತಿಯ ವಿದ್ಯಾರ್ಥಿ ಸಚಿನ್ ಎಸ್ ಆಚಾರ್ಯ, 80 ಮೀ. ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಈ ಮೂಲಕ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ.
Next Story