ಹೋಳಿ ಆಚರಣೆ: ಮದ್ಯ ಮಾರಾಟ ನಿಷೇಧ
ಕುಂದಾಪುರ, ಮಾ.7: ಹೋಳಿ ಹಬ್ಬ ಆಚರಿಸಲಿರುವ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ ಹಾಗೂ ಹಂಗಳೂರು ಗ್ರಾಮಗಳಲ್ಲಿ ಮಾ.8ರಂದು ಬೆಳಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12ಗಂಟೆಯವರೆಗೆ ಒಣ ದಿನ ಘೋಷಿಸಿ ಮದ್ಯ ಮಾರಾಟ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.
ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾರ್ವಿಕೇರಿ ಹಾಗೂ ಕೋಡಿ ಪರಿಸರದಲ್ಲಿ ಹೋಳಿಹಬ್ಬವನ್ನು ಆಚರಿ ಸಲಿರುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
Next Story