ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನೂ ಸ್ಪರ್ಧಿಸುವುದಿಲ್ಲ ಎಂದ ರಮೇಶ್ ಜಾರಕಿಹೊಳಿ
ವಿಜಯಪುರ, ಮಾ. 10: ‘ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ತಾವು ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ’ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಶುಕ್ರವಾರ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವ ಸ್ಥಾನ ಸಿಗದೇ ಇರುವುದಕ್ಕೆ ನನಗೆ ಯಾವುದೇ ನಿರಾಶೆ ಆಗಿಲ್ಲ. ನಾನು ಇದ್ದ ಸಚಿವ ಸ್ಥಾನ ಬಿಟ್ಟು ಬಿಜೆಪಿಗೆ ಬಂದಿದ್ದೇನೆ. ಬಿಜೆಪಿ ತತ್ವ-ಸಿದ್ಧಾಂತ ನಂಬಿ ಪಕ್ಷಕ್ಕೆ ಸೇರಿದ್ದೇನೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
‘ಕಾಂಗ್ರೆಸ್ ಮುಳುಗುವ ಹಡಗು, ಬಿಜೆಪಿಗೆ ಸೇರ್ಪಡೆಯಾದ ಯಾರೂ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಯಾರಾದರೂ ಬಿಜೆಪಿ ಬಿಡುವ ತೀರ್ಮಾನ ಮಾಡಿದರೆ ಅದು ಮೂರ್ಖತನದ್ದು, ನಾರಾಯಣಗೌಡ ಕಾಂಗ್ರೆಸ್ಗೆ ಸೇರಲಿದ್ದಾರೆಂಬ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ; ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಹಣ ದುರ್ಬಳಕೆ: ಬಿಜೆಪಿ ಶಾಸಕನ ವಿರುದ್ಧವೇ ಸಚಿವೆ ಶಶಿಕಲಾ ಜೊಲ್ಲೆ ಆರೋಪ