ಹಿರಿಯ ಪತ್ರಕರ್ತ ಬೆಲಗೂರು ಸಮೀವುಲ್ಲಾಗೆ ‘ರಂಜಾನ್ ಸಾಬ್’ ಪ್ರಶಸ್ತಿ
ಬೆಂಗಳೂರು, ಮಾ.15: ಹಿರಿಯ ಪತ್ರಕರ್ತ ಬೆಲಗೂರು ಸಮೀವುಲ್ಲಾ ಅವರಿಗೆ ಅಖಿಲ ಕರ್ನಾಟಕ ಮಹಮ್ಮದೀಯರ ವೇದಿಕೆ ವತಿಯಿಂದ ಕರ್ನಾಟಕ ಏಕೀಕರಣ ಹುತಾತ್ಮ ‘ರಂಜಾನ್ ಸಾಬ್’ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಮಾ.18ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು 10 ಸಾವಿರ ರೂ.ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಅಭಿಮಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಟಿ.ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಅಖಿಲ ಕರ್ನಾಟಕ ಮಹಮ್ಮದೀಯರ ವೇದಿಕೆ ಅಧ್ಯಕ್ಷ ಸಮೀಉಲ್ಲಾ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story