ದಕ್ಷಿಣ ಕನ್ನಡ
ಬಂಟ್ವಾಳ: ನೊಣಗಳು ಕಚ್ಚಿ ಮೂವರಿಗೆ ಗಾಯ
ವಾರ್ತಾ ಭಾರತಿ : 19 Mar, 2023

ಸಾಂದರ್ಭಿಕ ಚಿತ್ರ
ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಕಲ್ಪನೆ ಬಳಿ ನೊಣಗಳು ಕಚ್ಚಿ ಮೂವರು ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕಲ್ಪನೆ ಬಸ್ಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೂವರಿಗೆ ನೊಣಗಳು ಕಚ್ಚಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಲ್ಪನೆ ನಿವಾಸಿ ಪೂವಪ್ಪ (61) ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಉಳಿದಂತೆ ಮಹೇಶ್ ಮತ್ತು ಗೋಪಾಲ್ ಎಂಬವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)